ಎ. 26 ರಂದು ಲೋಕಸಭಾ ಚುನಾವಣೆ ನಡೆಯುವುದರಿಂದ ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ಮುಂದೆ ಬಂದಿದ್ದಾರೆ. ಮತದಾನವು ಶುಕ್ರವಾರ ಇರುವುದರಿಂದ ಅಂದು ರಜೆ ಇದೆ. ಶನಿವಾರ, ಭಾನುವಾರ ರಜೆಯಾಗಿದ್ದರಿಂದ ಮತದಾರರು ಪ್ರವಾಸದ ಯೋಜನೆ ಹಾಕಿಕೊಂಡು ತೆರಳಿದರೆ ಮತದಾನದ ಪ್ರಮಾಣ ಕಡಿಮೆಯಾದೀತು ಎಂಬ ಆಲೋಚನೆಯೊಂದಿಗೆ ಅಧಿಕಾರಿಗಳು ಈ ಕ್ರಮ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣ ಮುಚ್ಚಲಾಗುವುದು. ಎ.26 ರಂದು ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯನ್ನು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296