ಕೊರಟಗೆರೆ: ಜೆಡಿಎಸ್ ತೊರೆದು ನಾಲ್ವರು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಘಟನೆ ಕೊರಟಗೆರೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ವೇಳೆ ನಡೆದಿದೆ.
ತೆರವಾಗಿದ್ದ ಕೊರಟಗೆರೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಕುತೂಹಲ ಕೆರಳಿಸಿತ್ತು. ಮೀಸಲಾತಿ ಆಯ್ಕೆ, ಕೊನೆಗೂ ಪರಿಶಿಷ್ಟ ಮಹಿಳಾ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿದೆ. ಪರಿಶಿಷ್ಟ ಮಹಿಳಾ ಅಭ್ಯರ್ಥಿ ಒಬ್ಬರೇ ಇದ್ದ ಕಾರಣ ಅಧ್ಯಕ್ಷರ ಆಯ್ಕೆಯಲ್ಲಿ ಅದೃಷ್ಟ ಅನಿತಾ ಕೈ ಹಿಡಿದಿದ್ದು, ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಉಸ್ಮಾಪಾರಿಯಾ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದರು. ಪಟ್ಟಣ ಪಂಚಾಯತಿ 14 ತಿಂಗಳ ಅವಧಿಗೆ ಅಧ್ಯಕ್ಷ , ಉಪಾಧ್ಯಕ್ಷರ ಚುನಾವಣೆ ನೆಡೆಯಿತು. ಕಾಂಗ್ರೆಸ್ ಪಕ್ಷದ ಐದು ಜನ ಸದಸ್ಯರೊಂದಿಗೆ ಪಕ್ಷೇತರ ಅಭ್ಯರ್ಥಿ ನಟರಾಜ ಸೇರಿದಂತೆ ಮೂರು ಜನ ಜೆಡಿಎಸ್ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಆಯ್ಕೆಯಾಯಿತು.
ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಜೆಡಿಎಸ್ ಸದಸ್ಯರಿಗೆ ಹಾಗೂ ನೂತನ ಪದವಿ ಪಡೆದ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆರವರಿಗೆ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ತಿಳಿಸಿದರು.
ಈಗಾಗಲೇ ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಪುರಸಭೆ ಮಾಡಲು ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಕೊರಟಗೆರೆ ಪುರಸಭೆ ಆಗಲಿದೆ ಎಂದು ಇದೇ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಎಂದು ಕೂಗು:
ಇನ್ನೂ ಪರಮೇಶ್ವರ್ ಸ್ಥಳಕ್ಕೆ ಆಗಮಿಸುತಿದ್ದಂತೆ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಈ ವೇಳೆ ಅದೆಲ್ಲ ಹೇಳಬಾರದು ಸುಮ್ಮನಿರಿ ಎಂದು ಪರಮೇಶ್ವರ್ ಕಾರ್ಯಕರ್ತರ ಬಾಯ್ಮಚ್ಚಿಸಿದರು.
ಪಟ್ಟಣ ಪಂಚಾಯ್ತಿಯ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ತಹಶೀಲ್ದಾರ್ ಕೆ. ಮಂಜುನಾಥ್ ರ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ಜೆ.ಡಿ.ಎಸ್. ಚಿಹ್ನೆಯ ಅಭ್ಯರ್ಥಿಗಳು ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಜಯಗಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q