ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕುಪ್ಪಾಳು ಗ್ರಾಮ ಪಂಚಾಯಿತಿಗೆ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಕೊಂಡ್ಲಿಘಟ್ಟ ಕ್ಷೇತ್ರದ ಸದಸ್ಯೆ ಗಾಯತ್ರಿ ಮೈಲಾರ ಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಕರ ಡಾಳು ಕ್ಷೇತ್ರದ ಸದಸ್ಯೆ ಮಂಜುಳಾ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಕುಪ್ಪಾಳು ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇವೆ. ಗ್ರಾಮೀಣ ಜನತೆಯ ಕುಂದು ಕೊರತೆಗಳನ್ನು ಆಲಿಸಿ ಸರಿಪಡಿಸುವುದಾಗಿ ಹೇಳಿದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ನ್ಯಾಕೆನಹಳ್ಳಿ ಸುರೇಶ್ ಮಾತನಾಡಿ, ಈ ಪಂಚಾಯಿತಿಯ ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಗ್ರಾಮದ ಅಭಿವೃದ್ಧಿಗೆ ದುಡಿಯುತ್ತಾರೆ ಎಂದರು.
ಮಾಜಿ ಅಧ್ಯಕ್ಷ ಮಹೇಶ್ ಮಾತನಾಡಿ, ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ, ಶಾಲೆ, ಅಂಚೆ ಕಚೇರಿ, ರೈಲ್ವೆ ನಿಲ್ದಾಣ, ಆಸ್ಪತ್ರೆ, ಪಶು ಆಸ್ಪತ್ರೆಗಳು ಇವೆ, ನರೇಗಾ ಯೋಜನೆ ಮೂಲಕ ಶಾಲೆ, ಗ್ರಂಥಾಲಯ, ಶೌಚಾಲಯ ನಿರ್ಮಾಣ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.ಮಾಜಿ ಅಧ್ಯಕ್ಷರಾದ ಡಾ ಷಡಕ್ಷರಿ ಮಾತನಾಡಿ, ಪ್ರತಿಯೊಬ್ಬ ಸದಸ್ಯರು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದರು.
ಚುನಾವಣಾ ಅಧಿಕಾರಿಯಾಗಿ ಗ್ರೇಡ್ 2 ತಹಶೀಲ್ದಾರ್ ಜಗನ್ನಾಥ್ ಆಗಮಿಸಿದರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಸನ್ನಾತ್ಮ, ಕಾರ್ಯದರ್ಶಿ ಬಸವಯ್ಯ, ಮಹೇಶ್, ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಅನಿತಾ, ಯೋಗಾನಂದ, ವಸಂತ್, ಸದಸ್ಯರಾದ ಮೀನಾಕ್ಷಿ, ಶ್ರೀ ಲಕ್ಷ್ಮಿ, ಹೊನ್ನಮ್ಮ, ರೂಪ, ವಸಂತಕುಮಾರಿ, ದರ್ಶನ್ ಮತ್ತಿತರರು ಇದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q