ನವದೆಹಲಿ: ರಾತ್ರಿ ವೇಳೆ ಕರ್ಫ್ಯೂ ಹೇರುವುದು ಮತ್ತು ಹಗಲು ಚುನಾವಣಾ ರಾಲಿಗಳಿಗೆ ಲಕ್ಷಾಂತರ ಜನರನ್ನು ಸೇರಿಸುವುದು, ಇದು ಜನಸಾಮಾನ್ಯರ ಗ್ರಹಿಕೆಯನ್ನು ಮೀರಿದ್ದಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧವೇ ಪಿಲಿಭಿಟ್ ಸಂಸದ ವರುಣ್ ಗಾಂಧಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವರುಣ್ ಗಾಂಧಿ, ಉತ್ತರಪ್ರದೇಶದಲ್ಲಿರುವ ನಿಗದಿತ ಆರೋಗ್ಯ ಕೇಂದ್ರಗಳನ್ನು ಗಮನಿಸಿದರೆ, ನಮ್ಮ ಆದ್ಯತೆ ಗಂಭೀರ ಸ್ವರೂಪದ ಒಮಿಕ್ರಾನ್ ಹರಡುವುದನ್ನು ತಡೆಗಟ್ಟುವುದಾಗಿದೆಯೋ ಅಥವಾ ಚುನಾವಣಾ ಕಣದ ಶಕ್ತಿಯ ಪ್ರದರ್ಶನ ಮಾಡುವುದೇ ನಮ್ಮ ಆದ್ಯತೆಯಾಗಿದೆಯೇ ಎಂಬುದನ್ನು ನಾವು ಪ್ರಾಮಾಣಿಕವಾಗಿ ನಿರ್ಧರಿಸಬೇಕಾಗಿದೆ ಎಂದು ಗಾಂಧಿ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸೆಂಬರ್ 25ರಂದು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನ್ ವಿಶ್ವಾಸ್ ಯಾತ್ರೆಯಲ್ಲಿ ಭಾಗವಹಿಸಿದ್ದರು. ಅಷ್ಟೇ ಅಲ್ಲ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಭೆಗಳಲ್ಲಿಯೂ ಯೋಗಿ ಭಾಗವಹಿಸುತ್ತಾರೆ. ಇದು ಚುನಾವಣೆಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆಯುತ್ತಿದೆ ಎಂದು ವರುಣ್ ಗಾಂಧಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy