ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ವಿಚಾರದಲ್ಲಿ ಯತ್ನಾಳ್ ಮತ್ತು ಬಣದ ಹೋರಾಟ ಕೊನೆಗೂ ಫಲ ನೀಡಿದ್ದು, ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಬಗ್ಗೆ ಸ್ವತಃ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 8—10 ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ತಾನೇ ಚುನಾವಣೆ ಗೆದ್ದು ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎಂಟು ಹತ್ತು ದಿನಗಳಲ್ಲಿ ಚುನಾವಣೆ ನಡೆದು ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಭವಿಷ್ಯ ಯಾವುದೇ ಒಂದು ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನೆಯ ಚುನಾವಣೆ ನಡೆಯುತ್ತದೆ ಎಂದರೆ ಅದು ಬಿಜೆಪಿಯಲ್ಲಿ ಮಾತ್ರ ಎಂದು ಅವರು ಹೇಳಿದರು.
ಕಳೆದ ಒಂದು ವರ್ಷಗಳಿಂದ ನಮ್ಮ ಪಕ್ಷದ ಹಿರಿಯರು, ಕಾರ್ಯಕರ್ತರು ಒಟ್ಟಾಗಿ ಭ್ರಷ್ಟ, ದುಷ್ಟ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದೇವೆ. ನಾನು ರಾಜ್ಯಾಧ್ಯಕ್ಷನಾಗಿ ಹೇಗೆ ಕೆಲಸ ಮಾಡಿದ್ದೇನೆ ಎಂದು ರಾಜ್ಯದ ಜನತೆಗೆ ಕಾರ್ಯಕರ್ತರಿಗೆ, ಪಕ್ಷದ ಹಿರಿಯರಿಗೆ ತಿಳಿದಿದೆ. ಪಕ್ಷದ ಅಧ್ಯಕ್ಷನಾಗಿ ಮುಂದುವರಿಯುವ ಸಂಪೂರ್ಣ ವಿಶ್ವಾಸವಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx