ವಿಜಯಪುರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್ ಹರಿದು ಯುವಕನೊರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಗಾಂಧಿ ಚೌಕ್ ವೃತ್ತದ ಬಳಿ ನಡೆದಿದೆ.
ಮೃತ ಯುವಕನನ್ನು ಶುಭಂ ಸಂಕಪಾಲ (21) ಎಂದು ಗುರುತಿಸಲಾಗಿದೆ. ಇವರು ವಿಜಯಪುರದ ಡೋಬಲೆ ಗಲ್ಲಿ ನಿವಾಸಿಯಾಗಿದ್ದರು. ಗಾಯಗೊಂಡವರಾದ ಪ್ರಭಾಕರ ಜಂಗಲೆ (22) ಮತ್ತು ಲಖನ್ ಚವ್ಹಾಣ (28) ರವರಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಗಾಂಧಿ ಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಡಿವೈಎಸ್ ಪಿ ಬಸವರಾಜ ಯಲಿಗಾರ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC