ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ ಸಂಭವಿಸಿ ರೇಷ್ಮೆ ಶೆಡ್ ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರೋ ಘಟನೆ ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ದಿನ್ನೆಪಾಳ್ಯದ ಗ್ರಾಮದಲ್ಲಿ ನಡೆದಿದೆ.
ರಾತ್ರಿ ಬೇಸಿಗೆ ಕಾರಣ ಕಾರಣ ಮನೆಯ ಹೊರಗೆ ಮಲಗಿದ್ದ ಕುಟುಂಬದವರು ಅಪಾಯದಿಂದ ಪಾರಾಗಿದ್ದಾರೆ.
ದಿನ್ನೆಪಾಳ್ಯದ ಗ್ರಾಮದ ರೈತ ತಿಮ್ಮಪ್ಪನ ತೋಟದ ಮನೆಯಲ್ಲಿ ಬುಧವಾರ ತಡರಾತ್ರಿ ದುರ್ಘಟನೆ ನಡೆದಿದೆ.
ತೋಟದ ಮನೆಯಲ್ಲಿ ಎರಡು ವರ್ಷದಿಂದ ಕೂಡಿಟ್ಟಿದ್ದ ರಾಗಿ, ಜೋಳ ಕಡಲೆಕಾಯಿ, ತೊಗರಿಬೇಳೆ, ದಾಖಲೆ ಪತ್ರಗಳು ಬೆಂಕಿಗೆ ಆಹುತಿಯಾಗಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4