ಬೆಂಗಳೂರು: ಮುಂದಿನ ಮೂರು ವರ್ಷಗಳಿಗೆ ವಿದ್ಯುತ್ ದರ ಏರಿಕೆ ಮಾಡಲು ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಈ ಮೂಲಕ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ ಕಂಡು ಬಂದಿದೆ.
ಪ್ರತಿ ಯೂನಿಟ್ಗೆ ಮೊದಲ ವರ್ಷ ಅಂದರೆ, 2025–26 ಕ್ಕೆ 67 ಪೈಸೆ, 2 ನೇ ವರ್ಷ 2026–27 ಕ್ಕೆ ಯೂನಿಟ್ಗೆ 74 ಪೈಸೆ ಹಾಗೂ ಮೂರನೇ ವರ್ಷವಾದ 2027-28 ಕ್ಕೆ 91 ಪೈಸೆ ವಿಸ್ತರಣೆ ಮಾಡಲು ಮನವಿ ಸಲ್ಲಿಸಿದೆ. ಒಂದು ವೇಳೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಒಪ್ಪಿಗೆ ಸೂಚಿಸಿದರೆ ಮುಂದಿನ ವರ್ಷದಿಂದಲೇ ದರ ಏರಿಕೆಯಾಗಿಲಿದೆ ಎನ್ನಲಾಗಿದೆ.
ಬೇಡಿಕೆಯ ಹೆಚ್ಚಳವನ್ನು ನಿರ್ವಹಿಸಲು ವಿದ್ಯುತ್ ಖರೀದಿಗೆ ತಗಲುವ ವೆಚ್ಚವನ್ನು ಪೂರೈಸಲು ಈ ವಿದ್ಯುತ್ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx