ಬೆಂಗಳೂರು: ಹೈಕೋರ್ಟ್ ತೀರ್ಪು ಪ್ರಕಾರ ಕೆಇಆರ್‌ಸಿ ವಿದ್ಯುತ್ ದರ ಏರಿಕೆ ಆದೇಶ ನೀಡಿದೆ. ಈ ನಿರ್ಧಾರ ರಾಜ್ಯ ಸರ್ಕಾರದಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿಲ್ಲ. ಪ್ರತಿ ಯೂನಿಟ್ ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್ ದರದ ಏರಿಕೆಯಲ್ಲ. ಬದಲಿಗೆ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‍ಗೆ 36 ಪೈಸೆಯನ್ನು ಏರಿಸಿದೆ ಎಂದು ಹೇಳಿದರು.
ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‍ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ ಪ್ರಸ್ತಾವನೆಯನ್ನು ಪುರಸ್ಕರಿಸಿರಲಿಲ್ಲ. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಹೊಸ ಆದೇಶ ಹೊರಡಿಸಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4