ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿ, ಬೆಳಗುಲಿ ಮತ್ತು ದೇವರಹಳ್ಳಿ ಗ್ರಾಮದ ಸರಹದ್ದಿನಲ್ಲಿ ಹಾದು ಹೋಗಿರುವ ವಿದ್ಯುತ್ ಪ್ರಸರಣಾ ಮಾರ್ಗವನ್ನು ಡಿಸೆಂಬರ್ 24 ಅಥವಾ ತದನಂತರ ವಿದ್ಯುದ್ದೀಕರಣಗೊಳಿಸಲಾಗುವುದು ಎಂದು ವಿದ್ಯುತ್ ಪ್ರಸರಣಾ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಬೆಳಗುಲಿ ಗ್ರಾಮದಲ್ಲಿ ಉದ್ದೇಶಿತ 110/11 ಕೆವಿ ವಿದ್ಯುತ್ ಉಪಕೇಂದ್ರ ಹಾಗೂ ಹಾಲಿ ಇರುವ 110 ಕೆವಿ (ಕೆಬಿ ಕ್ರಾಸ್-ಹುಳಿಯಾರು) ಏಕಮುಖ ಪ್ರಸರಣ ಮಾರ್ಗದಿಂದ 1.350 ಕಿ.ಮೀ. ಉದ್ದದ 110 ಕೆವಿ ಲಿಲೋ ಮಾರ್ಗವನ್ನು ದ್ವಿಮುಖ ಗೋಪುರಗಳ ಮೇಲೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ವಿದ್ಯುದ್ದೀಕರಣಗೊಳಿಸಲಾಗುವುದು.
ಸಾರ್ವಜನಿಕರು ಸದರಿ ಗ್ರಾಮಗಳ ವಿದ್ಯುತ್ ಪ್ರಸರಣಾ ಮಾರ್ಗದಲ್ಲಿರುವ ಗೋಪುರಗಳನ್ನು ಹತ್ತುವುದಾಗಲೀ, ಲೋಹದ ತಂತಿ, ಹಸಿರು ಬಳ್ಳಿ, ಕೊಂಬೆ ಇತ್ಯಾದಿಗಳನ್ನು ವಿದ್ಯುತ್ ಪ್ರವಹಿಸುವ ತಂತಿಗಳಿಗೆ ಎಸೆಯುವುದಾಗಲೀ ಅಥವಾ ದನಕರುಗಳನ್ನು ಗೋಪುರಗಳಿಗೆ ಕಟ್ಟುವುದಾಗಲಿ ಮಾಡಬಾರದು. ಯಾರಾದರೂ ಇಂತಹ ಕೃತ್ಯಗಳನ್ನು ಎಸಗಿದಲ್ಲಿ ಉಂಟಾಗುವ ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯಾವುದೇ ರೀತಿಯಲ್ಲೂ ಜವಾಬ್ದಾರಿಯಾಗುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx