ಹೆಚ್.ಡಿ.ಕೋಟೆ : ತಾಲೂಕಿನ ಗದ್ದೆಹಳ್ಳ ಗ್ರಾಮದ 22 ವರ್ಷದ ಅವಿನಾಶ್ ಎಂಬ ಯುವಕ ಆನೆ ದಾಳಿಗೆ ಬಲಿಯಾದ ಘಟನೆ ನಡೆದಿದೆ.
ಸರಗೂರು ತಾಲೂಕು ಸಾಗರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗದ್ದೆಹಳ್ಳ ಗ್ರಾಮದ ಕಾಂತ ನಾಯಕನ ಪುತ್ರ ಅವಿನಾಶ್ 22 ವರ್ಷದ ಯುವಕ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಜಮೀನಿಗೆ ನೀರು ಹಾಯಿಸಲು ತೆರಳಿದ್ದು, ಮೋಟಾರ್ ಸ್ವಿಚ್ ಆನ್ ಮಾಡಿ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಐದು ಆನೆಗಳ ಹಿಂಡು ಮುಖಮುಖಿ ಆಗಿದೆ. ಸಂದರ್ಭದಲ್ಲಿ ಆನೆಗಳ ಗುಂಪು ಯುವಕನ ಮೇಲೆ ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. 11 ಗಂಟೆ ಆದರೂ ಸ್ಥಳಕ್ಕೆ ಅಧಿಕಾರಿಗಳು ಬರೆದಿದ್ದ ಕಾರಣ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4