ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ. ಸೆಟ್ ಅನ್ನು ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನಡೆಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದೆಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಮಂಗಳವಾರ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಇವರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಾದ ಕೆ. ಸೆಟ್ ಕಳೆದ ಎರಡು ವರ್ಷಗಳಿಂದ ನಡೆಯದಿರುವ ಬಗ್ಗೆ ಸರ್ಕಾರದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ಅರ್ಹತೆ ಹೊಂದಿರುವ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೆ. ಸೆಟ್ ಪರೀಕ್ಷೆಯನ್ನು ಕೆಇಎ ಮೂಲಕ ನಡೆಸಲು ಸರ್ಕಾರ ಕ್ರಮ ಕೈಗೊಂಡಿದೆ. ಯುಜಿಸಿಯ ಸಾಮಾನ್ಯ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರೀಕ್ಷೆ ನಡೆಸಲಾಗುವುದು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


