ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಬಿಜೆಪಿಯು ಪ್ರಚಾರಕ್ಕೆ ಸ್ಟಾರ್ ನಟರ ಮೊರೆ ಹೋಗಿದ್ದು , ಈ ನಡುವೆ ಎಲ್ಲಾ ಸ್ಟಾರ್ ನಟರು ಬಿಜೆಪಿ ಪರ ಪ್ರಚಾರಕ್ಕೆ ಬಂದರೆ ಸ್ವಾಗತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ನಟ ಕಿಚ್ಚ ಸುದೀಪ್ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ ಬೊಮ್ಮಾಯಿ ಅವರು ಹೇಳಿದ ಕಡೆಗಳಲ್ಲಿಯೂ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್, ನಟ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕ ಪಕ್ಷದ ಸ್ಟಾರ್ ಕ್ಯಾಂಪೇನರ್ ಆಗಿಯೇ ಪ್ರಚಾರ ಮಾಡುತ್ತಾರೆ. ಈಗಾಗಲೇ ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಸುದೀಪ್ ಎಲ್ಲೆಲ್ಲಿ ಪ್ರಚಾರ ಮಾಡ್ತಾರೆಂದು ಶೀಘ್ರವೇ ತೀರ್ಮಾನ ಮಾಡಲಾಗುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


