ತುಮಕೂರು: ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಒತ್ತಾಯಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕರ್ನಾಟಕ, ವತಿಯಿಂದ ಪ್ರತಿಭಟನೆ ನಡೆಯಿತು.
ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳು ನಡೆಯುತ್ತಿರುವುದು ವಿಪರ್ಯಾಸ. ವಿದ್ಯಾವಂತ, ಬಡ ಮತ್ತು ಪ್ರತಿಭಾವವಂತ ವಿದ್ಯಾರ್ಥಿಗಳು ನ್ಯಾಯಯುತವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ತಮ್ಮನಸನ್ನು ನನಸಾಗಿಸಲು ಅನೇಕ ಸವಾಲುಗಳನ್ನು ಎದುರಿಸುತ್ತಾರೆ. ಆದರೆ ಇಂತಹ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವುದು ವಿಪರ್ಯಾಸವಾಗಿದೆ ಎಂದು ಸಂಘಟನೆ ಖಂಡಿಸಿದೆ.
ಹುದ್ದೆಗಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದರೂ ಸಾವಿರರರು – ಲಕ್ಷಾಂತರ ಸಂಖ್ಯೆಯಲ್ಲಿ ಸರ್ಧಾತ್ಮಕ ಪರೀಕ್ಷೆ ಎದುರಿಸುತ್ತಾರೆ. ಆದರೆ ಅವರು ಎದುರಿಸುವ ಪರೀಕ್ಷೆಗಳಲ್ಲಿಯೇ ದೊಡ್ಡಮಟ್ಟದಲ್ಲಿ ಅಕ್ರಮಗಳು ನಡೆಯುತ್ತವೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ನಿರುದ್ಯೋಗಿಗಳ ಕನಸಿಗೆ ತಣ್ಣೀರೆರಚಿದಂತಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರೀ ಆಕ್ರಮ, ಭ್ರಷ್ಟಾಚಾರ ನಡೆಯುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳಲ್ಲಿ ನಿರಾಸೆಯನ್ನು ಮೂಡಿಸಿದೆ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿರುವ ಬಗೆಗೆ ಈ ಮೊದಲಿನಿಂದಲೂ ಆರೋಪಗಳು ಕೇಳಿ ಬರುತ್ತಿದ್ದರೂ ಕೂಡ ಇತ್ತೀಚಿನ 3-4 ವರ್ಷಗಳಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ಸರಣಿಯಂತೆ ಬಯಲಾಗುತ್ತಿದೆ. ಸರಕಾರಿ ಉದ್ಯೋಗಗಳಲ್ಲಿ ಅರ್ಜಿ ಮತ್ತು ಪ್ರತಿಭಾವಂತರಿಗೆ ಅವಕಾಶ ಲಭಿಸುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ಅತ್ಯಂತ ಪಾರದರ್ಶಕ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕೆಂಬ ಉದ್ದೇಶದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತ ಬರಲಾಗಿದೆ.
ಆದರೆ ಬಹುತೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ರಾಜಾರೋಷವಾಗಿ ನಡೆಯುತ್ತಿದ್ದು, ಈ ಪರೀಕ್ಷೆಗಳ ನೈಜ ಉದ್ದೇಶವನ್ನ ಬುಡಮೇಲು ಮಾಡಿವೆ, ಆಡಳಿತ ವ್ಯವಸ್ಥೆ, ರಾಜಕೀಯ ನಾಯಕರು, ಉನ್ನತ ಅಧಿಕಾರಿಗಳೂ ಈ ಆಕ್ರಮಗಳಲ್ಲಿ ಪ್ರತ್ಯಕ್ತಿ ಅಥವಾ ಪರೋಕ್ಷವಾಗಿ ಭಾಗಿಯಾಗಿರುವುದು ಕೂಡ ಕಾಣಿಬರುತ್ತಿರುವುದು ಖಂಡನೀಯವಾಗಿದೆ ಎಂದು ಎಬಿವಿಪಿ ಖಂಡಿಸಿದೆ.
KAS, PSI, SDA, FDA, ಸಹಾಯಕ ಪ್ರಾಧ್ಯಾಪಕರ, ಮತ್ತು ಇನ್ನುಳಿದ ಹುದ್ದೆಗಳ ನೇಮಕಾತಿ ನ್ಯಾಯಯುತವಾಗಿ ಪಾರದರ್ಶಕವಾಗಿ ನಡೆದಲ್ಲಿ ಮಾತ್ರ ಅದಕ್ಕೊಂದು ಗೌರವ, ಘನತೆ ಇರುತ್ತದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ತಪ್ಪಿತಸ್ಥರು ಎಷ್ಟೇ ದೊಡ್ಡವಾರಗಿರಲಿ, ಎಷ್ಟೇ ಪ್ರಭಾವಶಾಲಿಯಾಗಿರಲಿ, ಅವರಿಗೆ ಕಠಿಣ ಶಿಕ್ಷೆಯಾಗುವಂತೆ ಕಠಿಣ ಕ್ರಮವಹಿಸಲು ಎಬಿವಿಪಿ ಮುಖಂಡರು ಸರಕಾರಕ್ಕೆಒತ್ತಾಯಿಸಿದರು.
ವರದಿ: ಎ ಎನ್ ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy