ಗುಂಡ್ಲುಪೇಟೆ: ತಾಲೂಕಿನ ಗೋಪಾಲಪುರ ಗ್ರಾಮದ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಮಠಾಧೀಶ ಇಮ್ಮಡಿ ಗುರುಮಲ್ಲಸ್ವಾಮೀಜಿ ಅವರು ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಠದ ಜಮೀನಿನಲ್ಲಿ ಕೃಷಿ ಕಾರ್ಮಿಕರೊಂದಿಗೆ ಕಳೆ ಕೀಳುತ್ತಿದ್ದಾಗ ಹಾವು ಶ್ರೀಗಳ ಪಾದದ ಬಳಿ ಕಚ್ಚಿದೆ. ಚಿಕಿತ್ಸೆ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ವಾಮೀಜಿಗಳ ನಿಧನಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್, ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶಪ್ರಸಾದ್, ಚಾಮುಲ್ ಅಧ್ಯಕ್ಷ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಹೆಚ್.ಎಸ್.ನಂಜಪ್ಪ ಸೇರಿದಂತೆ ಇನ್ನಿತರ ಸಂತಾಪ ಸೂಚಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700