ರಾಮನಗರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ನೌಕರ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶುಕ್ರವಾರ ರಾಮನಗರದಲ್ಲಿ ನಡೆದಿದೆ.
ಯೋಗ್ಯ ಕುಮಾರ್(45) ಮೃತ ನೌಕರ. ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗ್ಯ ಕುಮಾರ್ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಕ್ಷಣವೇ ಇತರ ಸಹೋದ್ಯೋಗಿಗಳು ಯೋಗ್ಯ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


