ಹರಿಯಾಣದ ಕೈತಾಲ್ ನಲ್ಲಿ ಪೊಲೀಸರು ಮತ್ತು ಪುಂಡರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್ ವೇಳೆ, ದಾಳಿಕೋರರು ಪೊಲೀಸ್ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ವರದಿ ಪ್ರಕಾರ ಕೈತಾಲ್‌ನಲ್ಲಿ ನಾಲ್ವರು ದುಷ್ಕರ್ಮಿಗಳು ಇದ್ದಾರೆ ಎಂದು ಮಾಹಿತಿ ಬಂದ ಹಿನ್ನಲೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಯಲ್ಲಿ ಓರ್ವ ಅಪರಾಧಿಯನ್ನು ಬಂಧಿಸಲಾಗಿದೆ.


