ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಚುರುಕುಗೊಂಡಿದೆ. ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕನನ್ನು ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಆತ ಹಲವು ದಿನಗಳಿಂದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದು, ಲಷ್ಕರ್-ಎ-ತಯಬಾ (ಎಲ್‌ಇಟಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ.
ಈತನಿಂದ ಒಂದು ಬಂದೂಕು, 2 ಮ್ಯಾಗಜೀನ್‌ಗಳು ಸೇರಿದಂತೆ 30 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz