ರಾಯ್ಪುರ: ಛತ್ತೀಸ್ ಗಡದ ಸುಕಾ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 10 ಜನ ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ನಕ್ಸಲೀಯರು ಒಡಿಶಾ ಮೂಲಕ ಛತ್ತೀಸ್ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಕಾರ್ಯಾಚರಣೆ ಆರಂಭಿಸಿದೆ. ಇಂದು ಬೆಳ್ಳಂಬೆಳಗ್ಗೆ ಸುಕಾ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಕಾರ್ಯಾಚರಣೆ ಕೈಗೊಂಡಿತ್ತು.
ಈ ವೇಳೆ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ 10ಮಾವೋವಾದಿಗಳನ್ನು ಭದ್ರತಾ ಪಡೆ ಎನ್ಕೌಂಟರ್ ಮಾಡಿದೆ ಎಂದು ಬಸ್ತಾರ್ ಇನ್ಸ್ ಪೆಕ್ಟರ್–ಜನರಲ್ ಆಫ್ ಪೊಲೀಸ್ ಪಿ. ಸುಂದರರಾಜ್ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296