ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಮೀಸಲಾತಿ ಹೆಚ್ಚಳದ ಬಗ್ಗೆ ನ್ಯಾ. ನಾಗಮೋಹನದಾಸ್ ಸಮಿತಿ ನೀಡಿದ್ದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಒಪ್ಪಿಕೊಂಡು ಮೀಸಲಾತಿ ಹೆಚ್ಚಳ ಜಾರಿಗೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.
ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ರಾಜ್ಯದ ಪರಿಶಿಷ್ಟ ಜಾತಿ ಪಂಗಡದವರಿಗೆ ಇಂದಿನಿಂದ ಮೀಸಲಾತಿ ಹೆಚ್ಚಳವಾಗಲಿದೆ.
ಪರಿಶಿಷ್ಟ ಜಾತಿ ಮೀಸಲಾತಿ ಶೇ. 15 ರಿಂದ ಶೇ. 17 ರಷ್ಟು, ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 3ರಿಂದ ಶೇ. 7ರಷ್ಟು ಹೆಚ್ಚಳವಾಗಲಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಿಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


