ತುಮಕೂರು: ಜಿಲ್ಲೆಯಲ್ಲಿ ಎರಡು ತಲೆಮಾರುಗಳಿಂದ ಭೂಮಿ ವಸತಿಗಳ ಸಮಸ್ಯೆಗಳನ್ನು ತಾಲ್ಲೂಕು ಮತ್ತು ತುಮಕೂರು ಜಿಲ್ಲಾಡಳಿತ ಬಗೆಹರಿಸಿರುವುದಿಲ್ಲ ಈ ಹಿನ್ನೆಲೆಯಲ್ಲಿ ಹಂದ್ರಾಳ್ ನಾಗಭೂಷನ್ ಅವರ ನೇತೃತ್ವದಲ್ಲಿ ಇಂದಿನಿಂದ ಇಂದಿನಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಸಾವಿರಾರು ಜನರು ಭೂಮಿ ಮತ್ತು ವಸತಿಗಾಗಿ ಅರ್ಜಿಗಳನ್ನು ಹಾಕಿಕೊಂಡು ಇಂದು, ನಾಳೆ ಭೂಮಿ ವಸತಿಗೆ ಸಾಗುವಳಿ ಹಕ್ಕುಪತ್ರ ಸಿಗಬಹುದು ಎಂಬ ಆಶಾಭಾವನೆಯಿಂದ ಕಾಯುತ್ತಿದ್ದಾರೆ. ಭೂಮಿಗಾಗಿ ಅನೇಕ ಬಾರಿ ಕಛೇರಿಯಿಂದ ಕಛೇರಿಗಳಿಗೆ ಅಲೆದರೂ ಕೂಡ ಇದುವರೆಗೂ ಅರ್ಹರಿಗೆ ಭೂಮಿ ವಸತಿ ದೊರೆತಿಲ್ಲ.
ರಾಜ್ಯ ಸೇರಿದಂತೆ ತುಮಕೂರು ಜಿಲ್ಲೆಯ ಈ ಭೂಮಿ ವಸತಿ ಸಮಸ್ಯೆಗಳನ್ನು ಬಗೆಹರಿಸಲು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಹೆಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ವಸತಿ ಹೋರಾಟ ಸಮಿತಿಯಿಂದ 2018 ನೇ ಸಾಲಿನಿಂದ ಅನೇಕ ಬಾರಿ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ತಾಲ್ಲೂಕು ಕಛೇರಿಗಳ ಮುಂದೆ ಪ್ರತಿಭಟನೆಗಳು ನಡೆಸಿದ್ದರೂ ಕೂಡ ಇದುವರೆಗೂ ಸಮಸ್ಯೆಗಳು ಬಗೆಹರಿದಿಲ್ಲ.
ಹೀಗಾಗಿ ಭೂಮಿ ಮತ್ತು ವಸತಿ ಸಮಿತಿಯು ಈಗಾಗಲೇ ಜಿಲ್ಲಾಡಳಿತದ ಗಮನಕ್ಕೆ ತಂದಿರುವ ಭೂಮಿ ವಸತಿ ಸಮಸ್ಯೆಗಳು ಹಾಗೂ ತುಮಕೂರು ಜಿಲ್ಲಾ ಪಂಚಾಯಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವವರೆಗೂ ಇಂದಿನಿಂದ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ, ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ನೇತೃತ್ವದಲ್ಲಿ ಅನಿರ್ದಿಷ್ಟ ಅವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB