ಬೆಂಗಳೂರು;ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಕರು, ಚಾಲಕ, ಕಂಡಕ್ಟರ್ ಮಾಸ್ಕ್ ಬಳಸುವುದು ಕಡ್ಡಾಯ ಮಾಡಿ ಎಂದು ಇಲಾಖೆ ಆದೇಶ ಹೊರಡಿಸಿದೆ.
ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಈ ಸಂಬಂಧ ಶೀಘ್ರವೇ ಬಿಎಂಟಿಸಿ ಗೈಡ್ಲೈನ್ಸ್ ಬಿಡುಗಡೆ ಮಾಡಲಿದೆ. ಒಂದು ವೇಳೆ ಮಾಸ್ಕ್ ಹಾಕಿಲ್ಲ ಅಂದರೆ ಬಸ್ ಗೆ ಹೋಗಲು ಅವಕಾಶ ನೀಡಲ್ಲ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy