ಬೆಂಗಳೂರು: ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಬೃಹತ್ ನಾ-ನಾಯಕಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಅರಮನೆ ಮೈದಾನದಲ್ಲಿ ನಡೆಯುವ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಭಾಗಿಯಾಲಿದ್ದಾರೆ. ಈ ಸಮಾವೇಶದಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮಹಿಳಾ ಕಲ್ಯಾಣಕ್ಕಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲು ನಿರ್ಧರಿಸಿದೆ.
ಒಂದು ಲಕ್ಷ ಮಹಿಳಾ ಕಾರ್ಯಕರ್ತರನ್ನು ಕಾರ್ಯಕ್ರಮದಲ್ಲಿ ಸೇರಿಸುವ ಯೋಜನೆಯನ್ನು ಕಾಂಗ್ರೆಸ್ ಹಾಕಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


