ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಅದೇ ರೀತಿ 5 ರಾಜ್ಯಗಳಲ್ಲಿ ತೆರವಾದ ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಕೂಡ ಇಂದು ಪ್ರಕಟವಾಗಲಿದೆ.
ಗುಜರಾತ್ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ.
ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಅಧಿಕಾರಕ್ಕೆ ಇರುವ ನಿರೀಕ್ಷೆಯಲ್ಲಿ ಬಿಜೆಪಿ ಇದ್ದು, ಕಾಂಗ್ರೆಸ್ ಮತ್ತು ಆಪ್ ಕೂಡ ಪೈಪೋಟಿ ನೀಡುವ ಸಾಧ್ಯತೆ ಇದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದಾಗಿ ಹೇಳಲಾಗಿದೆ.
ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 1985ರಿಂದ ಪ್ರತಿ ಐದು ವರ್ಷಕ್ಕೊಮ್ಮೆ ಇಲ್ಲಿ ಸರ್ಕಾರ ಬದಲಾಗುತ್ತೆ. ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರುತ್ತಿವೆ. ಈ ಬಾರಿ ಆಡಳಿತಾರೂಢ ಬಿಜೆಪಿಯೇ ಅಧಿಕಾರಕ್ಕೆರಲಿದೆ ಎಂದು ಸಮೀಕ್ಷೆಗಳು ಹೇಳಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy