ಬೆಂಗಳೂರು: ಇಂದು ನವದೆಹಲಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರಳಲಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.
ಸಂಸದೀಯ ಮಂಡಳಿ, ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಸ್ಥಾನ ದೊರೆತ ಬಳಿಕ ಇದೇ ಮೊದಲ ಬಾರಿಗೆ ಅವರು ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ.
ಪಕ್ಷದ ವರಿಷ್ಠರನ್ನು ಯಡಿಯೂರಪ್ಪ ಭೇಟಿಯಾಗಲಿದ್ದು, ಅವಕಾಶ ದೊರೆತಲ್ಲಿ ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿ ಮಾಡಲಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ, ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy