ಬೆಂಗಳೂರು: ಇಂದು ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ತಲಾ 5000 ರೂ. ಹಣ ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ.ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಿದ್ದಾರೆ.
ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ನೆರವಾಗಲು ನೇಕಾರ ಸಮ್ಮಾನ್ ಯೋಜನೆಯನ್ನು ಮುಖ್ಯಮಂತ್ರಿಗಳು 2020 -21ನೇ ಸಾಲಿನಿಂದ ಅನ್ವಯವಾಗುವಂತೆ ಘೋಷಣೆ ಮಾಡಿದ್ದು, ಕೈಮಗ್ಗ ನೇಕಾರರಿಗೆ ಇದು ನೆರವಾಗಲಿದೆ ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy