ಅಹಮದಾಬಾದ್: ಮೋದಿ ಉಪನಾಮ ಹೇಳಿಕೆ ಕುರಿತು ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದ ಕಾರಣ, ಪ್ರಕರಣ ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ. ಗೀತಾ ಗೋಪಿ ಅವರು ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಎಜೆ ದೇಸಾಯಿ ಅವರಿಗೆ ಹಸ್ತಾಂತರಿಸುವಂತೆ ಅಥವಾ ಬೇರೆ ಪೀಠಕ್ಕೆ ನಿಯೋಜಿಸುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ನಿರ್ದೇಶನ ನೀಡಿದ್ದರು.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಕಳೆದ ತಿಂಗಳು, ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿತ್ತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದಲೂ ಅನರ್ಹಗೊಳಿಸಲಾಗಿತ್ತು. ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ ಟೀಕೆ’ ವಿರುದ್ಧ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಪ್ರಕರಣ ದಾಖಲಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


