ಬೆಂಗಳೂರು: ಕೊವಿಡ್ 19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ಸಾರ್ವಜನಿಕರ, ವ್ಯಾಪಾರಿಗಳ ತೀವ್ರ ವಿರೋಧಗಳ ನಡುವೆಯೇ ಸರ್ಕಾರ ನೈಟ್ ಕರ್ಫ್ಯೂ ನಡೆಸಲು ಮುಂದಾಗಿದೆ.’
ಇಂದಿನಿಂದ ರಾಜ್ಯಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಡಿಸಿಪಿಗಳ ಜೊತೆಗೆ ಬೆಂಗಳೂರು ಪೊಲೀಸರು ಆಯುಕ್ತ ಗೌರವ್ ಗುಪ್ತಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಪ್ಯೂ ಜಾರಿ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.
ಹೊಸ ವರ್ಷದ ಸಂದರ್ಭದಲ್ಲಿಯೇ ನೈಟ್ ಕರ್ಫ್ಯೂ ಜಾರಿಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸ ವರ್ಷದಲ್ಲಿ ಸಾಕಷ್ಟು ಲಾಭಗಳಿಸುತ್ತಿದ್ದ, ಹೊಟೇಲ್, ಪಬ್ ಮೊದಲಾದ ಉದ್ಯಮಗಳಿಗೆ ತೀವ್ರ ಏಟು ಬಿದ್ದಿದೆ. ಜೊತೆಗೆ ಬೀದಿ ವ್ಯಾಪಾರಿಗಳಿಂದ ಹಿಡಿದು, ಪ್ರತಿಯೊಬ್ಬರಿಗೂ ನೈಟ್ ಕರ್ಫ್ಯೂನಿಂದ ತೊಂದರೆಯಾಗಲಿದೆ. ಆದರೆ ಕೊವಿಡ್ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಅನಿವಾರ್ಯವಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಈ ಎಲ್ಲ ಚರ್ಚೆಗಳ ನಡುವೆಯೇ ಇಂದು ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy