ಬೆಂಗಳೂರು: ಈ ನಡುವೆ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಯಾದ ಬಳಿಕ ಹಲವು ಮಂದಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಬಿಜೆಪಿ ಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಇಂದು ಬೆಂಗಳೂರಿಗೆ ಆಗಮಿಸಿ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಹಾಲಿ ಎಂಎಲ್‌ಸಿ ಚನ್ನರಾಜ್ ಜೊತೆಗೆ ಆಗಮಿಸಿದ್ದು, ಇದೇ ವೇಳೆ ಅವರು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಕ್ಷ್ಮಣ ಸವದಿ ಅವರು ಇಂದು ಸಂಜೆ ಸಭಾಪತಿಗಳನ್ನು ಭೇಟಿಯಾಗಿ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಅವರು ಬಿಜೆಪಿ ಪಾರ್ಟಿಯ ಪ್ರಾಥಮಿಕ ಸ್ಥಾನಕ್ಕೂ ಕೂಡ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಮುಂದಿನ ರಾಜಕೀಯದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುಂಚೆ ನಿನ್ನೆ ಕಾಂಗ್ರೆಸ್ ಶಾಸಕ ರಾಜು ಕೂಡ ಸವದಿ ಜೊತೆಗೆ ಮಾತನಾಡಿದ್ದರು, ಈ ಮೂಲಕ ಅವರನ್ನು ಕಾಂಗ್ರೆಸ್‌ಗೆ ಕರೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರು ಎನ್ನುವ ಸಂದೇಶವನ್ನು ಅವರು ತಿಳಿಸಿದ್ದು. ಬೆಳಗಾವಿಯಲ್ಲಿರುವ ಮತಗಳನ್ನು ಕಾಂಗ್ರೆಸ್ ಕಡೆಗೆ ತಿರುಗಿಸುವ ನಿಟ್ಟಿನಲ್ಲಿ ಲಕ್ಷ್ಮಣ ಅವರನ್ನು ಈ ಪಾರ್ಟಿಗೆ ಕರೆತರಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ರಾಜು ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


