ಮಾರ್ಚ್ 20, 2023ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಚರಿಸಲಾಗುತ್ತಿದೆ.
ಈ ದಿನದಂದು ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಮಾ.20ರಂದು ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ವಿಧಾನ ಸೌಧದಲ್ಲಿರುವಂತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ, ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


