ನವದೆಹಲಿ : ಆರ್ಥಿಕವಾಗಿ ಮೇಲ್ವರ್ಗದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲು ನೀಡುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದೆ.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸೆಪ್ಟೆಂಬರ್ 27ರಂದು ಈ ಸಂಬಂಧ ಸಲ್ಲಿಕೆಯಾಗಿದ್ದಂತ ಅರ್ಜಿಗಳ ವಿಚಾರಣೆ ನಡೆಸಿತ್ತು. ಈ ಬಳಿಕ ತನ್ನ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಹಿಂದುಳಿದ ವರ್ಗದವರಿಗೆ ಮೀಸಲು ಕಲ್ಪಿಸುವ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ.ಮುಖ್ಯ ನ್ಯಾಯ ಮೂರ್ತಿ ಯು.ಯು. ಲಲಿತ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಲಿದೆ.
ಸಂವಿಧಾನದ 103ನೇ ತಿದ್ದುಪಡಿಯನ್ನು ಅಸಿಂಧುಗೊಳಿಸಬೇಕೆಂದು ಒಂದು ವರ್ಗ ವಾದ ಮಾಡಿಸಿತ್ತು. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರವು ಶೇ.50:50ರ ಮೀಸಲಿಗೆ ಧಕ್ಕೆ ಬಾರದ ರೀತಿಯಲ್ಲಿ ಇವಿಎಸ್ ಗೆ ಮೀಸಲು ಕಲ್ಪಿಸಲಾಗಿದೆ ಎಂಬುದಾಗಿ ಸಮರ್ಥಿಸಿಕೊಂಡಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy