ಬೀದರ್: ಲೋಕ ಸಭೆ ಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕೆಲವು ದಿವಸಗಳ ಹಿಂದೆ ರೈತರ ಸಮಸ್ಯೆ ಬಗ್ಗೆ ಬೀದರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ಜರುಗಿತ್ತು, ಅದರಲ್ಲಿ ವಿಶೇಷವಾಗಿ ಬೀದರ ಜಿಲ್ಲೆಯ ರೈತರ ಹೊಲದ ವಿದ್ಯುತ್ ನ ಅನೇಕ ಸಮಸ್ಯೆ ಕಂಡುಬಂದಿತ್ತು, ಎಲ್ಲ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಬೀದರ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ಗಮನಕ್ಕೆ ಸಂಸದರು ತಂದಿದ್ದಾರೆ.
ಈಶ್ವರ್ ಖಂಡ್ರೆ ಅವರು ಎಲ್ಲ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಗಣಿಸಿ ರೈತರ ಹೊಲದ ವಿದ್ಯುತ್ ನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಸಚಿವರಾದ ಕೆ.ಜೆ.ಜಾರ್ಜ್ ಅವರನ್ನು ಜಿಲ್ಲೆಗೆ ಆಹ್ವಾನ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಗುರುವಾರ ಬೀದರ್ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂಧನ ಇಲಾಖೆಯ ಸಚಿವರಾದ ಕೆ.ಜೆ.ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜೆಸ್ಕಾಂ ಅಧ್ಯಕ್ಷರಾದ ಪಂಕಜ್ ಕುಮಾರ ಪಾಂಡೆ, ಬಸವಕಲ್ಯಾಣ ಕ್ಷೇತ್ರದ ಶಾಸಕರಾದ ಶರಣು ಸಲಗರ , ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಸೇರಿದಂತೆ, ಇಲಾಖೆಯ ಹಿರಿಯ ಅಧಿಕಾರಿಗಳು, ಜೆಸ್ಕಾo, ಕೆಪಿಟಿಸಿಲ್ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4