ಬೆಂಗಳೂರು: ಸರ್ಕಾರದ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ ಮಾಡುತ್ತೇವೆ ಅಂತ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಕೇಳಿದರು. ಗುತ್ತಿಗೆ ಆಧಾರದಲ್ಲಿ ಆಗೋ ನೇಮಕಾತಿ ಮೀಸಲಾತಿ ಜಾರಿ ಮಾಡಿ. ಕೇವಲ ಸರ್ಕಾರ ಹುದ್ದೆಗೆ ಮಾತ್ರ ಮೀಸಲಾತಿ ಜಾರಿ ಮಾಡಿದರೆ ಸಾಲದು. ಸರ್ಕಾರಿ ಇಲಾಖೆಗೆ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಎಲ್ಲಾ ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಆಗಿದೆ. ಹೊಸ ನೇಮಕಾತಿಯಲ್ಲಿ ಮೀಸಲಾತಿ ಕೊಟ್ಟೆ ಕೊಡುತ್ತೇವೆ. ಎಲ್ಲಾ ನೇಮಕಾತಿಯಲ್ಲಿ ಸಂವಿಧಾನದ ಪ್ರಕಾರ ಮೀಸಲಾತಿ ಕೊಡ್ತೀವಿ. ಇದರಲ್ಲಿ ಎರಡು ಮಾತಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


