ಬೆಂಗಳೂರು: ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕೆ ಪೇಪರ್ ಬರೆಯಲು ಅನುಮತಿ ಸಿಗದ ಕಾರಣ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ.
ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ 5ನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ಈತನಿಗೆ ತಡವಾಗಿ ಬಂದ ಹಿನ್ನೆಲೆ ಪರೀಕ್ಷಗೆ ಕೂರಲು ಅನುಮತಿ ನೀಡದೇ ನಿಂದಿಸಿದ್ದು ಕಾಲೇಜಿನಿಂದ ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಯುವಕ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ ಅವರ ವಿರುದ್ಧ ಪೋಷಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296