nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಇಂಗ್ಲೀಷ್ ಭಾಷಾ ಜ್ಞಾನ ಮಹಾ ಸಾಗರವಿದ್ದಂತೆ ಆಳ ತಿಳಿಯಲು ಸತತ ಪರಿಶ್ರಮಪಡಬೇಕು”
    ಮಧುಗಿರಿ February 2, 2025

    “ಇಂಗ್ಲೀಷ್ ಭಾಷಾ ಜ್ಞಾನ ಮಹಾ ಸಾಗರವಿದ್ದಂತೆ ಆಳ ತಿಳಿಯಲು ಸತತ ಪರಿಶ್ರಮಪಡಬೇಕು”

    By adminFebruary 2, 2025No Comments2 Mins Read
    english

    ಮಧುಗಿರಿ:  ಮುದ್ದೇನೇರಳೆಕೆರೆ ಸರ್ಕಾರಿ ಶಾಲೆಯಲ್ಲಿ ‘ಇಂಗ್ಲಿಷ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಶಾಲಾ ಮಕ್ಕಳಿಗೆ ಇಂಗ್ಲಿಷ್ ಭಾಷಾ ಜ್ಞಾನಾಭಿವೃದ್ಧಿಗೆ ಹಾಗೂ ಸಂವಹನಕ್ಕಾಗಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಿದ್ದ ಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕರಾದ ಮಂಜುನಾಥ್, ಇಂಗ್ಲೀಷ್ ಭಾಷಾಜ್ಞಾನ ಮಹಾಸಾಗರವಿದ್ದಂತೆ ಅದರ ಆಳ ತಿಳಿಯಲು, ಭಾಷಾ ಕೌಶಲ್ಯ ಹೆಚ್ಚಿಸಿಕೊಳ್ಳಲು ಸತತವಾಗಿ ಪರಿಶ್ರಮ ಪಡಬೇಕು ಎಂದು ಹೇಳಿದರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇಂಗ್ಲೀಷ್ ಭಾಷಾ ಉಪನ್ಯಾಸಕರಾದ ಮಾರುತಿ ಬಿ.ಎಲ್. ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಗು ಹುಟ್ಟಿದ ತಕ್ಷಣ ನಡೆಯುವುದಿಲ್ಲ, ಅದು ಸತತ ಪ್ರಯತ್ನ ಪಟ್ಟು ನಡೆಯಲು ಪ್ರಾರಂಭಿಸುತ್ತದೆ. ಹಾಗೆಯೇ ಶಾಲೆಯಲ್ಲಿ ಮಕ್ಕಳು ಸಹ ಇಂಗ್ಲಿಷ್ ಭಾಷೆ ಸಂವಹನ ನಿರಂತರ ಪ್ರಯತ್ನದಿಂದ ಸಾಧ್ಯವಾಗುತ್ತದೆ. ಪ್ರತಿದಿನ ಶಾಲೆಗಳಲ್ಲಿ ಅಭ್ಯಾಸ ಮಾಡಬೇಕು ಹಾಗೂ ಇತ್ತೀಚಿನ ದಿನಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಕಂಪ್ಯೂಟರ್ ಜ್ಞಾನ ಎಷ್ಟು ಪ್ರಾಮುಖ್ಯವಾಗಿ ಬೇಕು, ಹೊರ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಜೀವನ ನಡೆಸಲು ಇಂಗ್ಲೀಷ್ ಭಾಷೆ ಅತ್ಯಗತ್ಯ ಎಂದು ನುಡಿದರು.

    ಮತ್ತೋರ್ವ ಅತಿಥಿಗಳಾಗಿ ಆಗಮಿಸಿದ್ದ ಸಂಚಲನ ತಂಡದ ತಾಲೂಕು ಸಂಯೋಜಕರಾದ ಸುಚೇಂದ್ರ ಮಾತನಾಡಿ, ಶಾಲೆಯಲ್ಲಿ ಮಕ್ಕಳು ಆದಷ್ಟು ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಿ, ಪೋಷಕರು ಸಹ ಮಕ್ಕಳಿಗೆ ಇಂಗ್ಲಿಷ್ ನಲ್ಲಿ ಮಾತನಾಡಲು ಪ್ರೇರೇಪಿಸಬೇಕು ಮತ್ತು ಪ್ರೋತ್ಸಾಹಿಸಬೇಕು ಆಗ ಮಾತ್ರ ಭಾಷಾ ಕೌಶಲ್ಯ ಹೆಚ್ಚುತ್ತದೆ ಎಂದರು.

    ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕರಾದ ಅಶ್ವತಪ್ಪ,  ಇಂಗ್ಲಿಷ್ ಭಾಷೆ ಎನ್ನುವುದು ಬ್ರಿಟಿಷರು ನಮ್ಮ ದೇಶಕ್ಕೆ ಬಿಟ್ಟುಹೋದ ಪರಂಪರೆ ಇಂದು ಅದು ತುಂಬಾ ಪ್ರಭಾವ ಬೀರಿದೆ. ಉನ್ನತವಾದ ಹುದ್ದೆಯನ್ನು ಅಲಂಕರಿಸಲು ಅನಿವಾರ್ಯವಾಗಿದೆ ಎಂದು ನುಡಿದರು.

    ನಾವು ಎಲ್ಲೇ ಹೋದರು ಮಾತನಾಡುವ ಮೊದಲು ಜೈ ಭೀಮ್ ಎನ್ನುತ್ತೇವೆ, ಇದರ ಅರ್ಥ ಜೈ ಎಂದರೆ ಜ್ಞಾನ, ಭೀಮ್ ಎಂದರೆ ಹೊರ ಹಾಕು ಎಂಬುದಾಗಿದೆ ಡಾ.ಬಿ.ಆರ್ ಅಂಬೇಡ್ಕರ್ ರವರು ಸಹ ನಮ್ಮಂತೆ ಬಡ ಕುಟುಂಬದಿಂದ ಬಂದು ಎಲ್ಲಾ ಭಾಷೆಗಳನ್ನು ಕಲಿತು ಮಹಾಜ್ಞಾನಿಯಾದರು ಎಂದು ಗ್ರಾಮದ ಹಾಲಿನ ಡೈರಿ ಕಾರ್ಯದರ್ಶಿ ರಾಜಣ್ಣ ಎಂ.ಎನ್. ಮಕ್ಕಳಿಗೆ ಇಂಗ್ಲಿಷ್ ಕಲಿಯಲು ಸ್ಪೂರ್ತಿ ತುಂಬಿದರು.

    ಗ್ರಾಮ ಪಂಚಾಯಿತಿ ಸದಸ್ಯರಾದ ನಾರಾಯಣಮೂರ್ತಿರವರು ಮಾತೃಭಾಷೆ ಜೊತೆಗೆ ಇಂಗ್ಲಿಷ್ ಭಾಷೆಯನ್ನು ಕಲಿಯಲು ಸೂಚಿಸಿದರು . ಮುಖ್ಯ ಶಿಕ್ಷಕಿ ನರಸಮ್ಮ ಮಕ್ಕಳಿಗೆ ಮನೆಯಲ್ಲೂ ಶಾಲೆಯಲ್ಲೂ ಹೆಚ್ಚು ಹೆಚ್ಚು ಇಂಗ್ಲೀಷ್ ಪದಗಳ ಬಳಕೆ ಮಾಡುವುದರಿಂದ ಭಾಷಾ ಸಂವಹನ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

    ಗ್ರಾಮದ ‘ಶ್ರೀ ಲಕ್ಷ್ಮಿ ಲಕ್ಷ್ಮಮ್ಮ ನರಸಿಂಹಯ್ಯ ಚಾರಿಟಬಲ್ ಟ್ರಸ್ಟ್’ ನ ಅಧ್ಯಕ್ಷ ಹಾಗೂ ದಿವಂಗತ ಎನ್. ಗಂಗಪ್ಪನವರ ಸಹೋದರ ಶ್ರೀಲಕ್ಷ್ಮಿ ನರಸಪ್ಪ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು, ಮಕ್ಕಳಿಗೆ ನೆರಳಿಗೋಸ್ಕರ ಪೆಂಡಾಲ್ ಮತ್ತು ಚೇರ್ ಗಳ ವ್ಯವಸ್ಥೆಯನ್ನು  ಮಾಡಿಸಿದ್ದರು.

    ಇಂಗ್ಲೀಷ್ ಭಾಷಾ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ನೀಡಲು ದಾಸಪ್ಪನ ಪಾಳ್ಯ ಗ್ರಾಮದ ಶ್ರೀ ದೇವದಾಸ್ ರವರು ಕೊಡುಗೆ ನೀಡಿದ್ದರು.

    ಶಾಲಾ ಶಿಕ್ಷಕರಾದ ರೇಖಾ ,ಮಮ್ತಾಜ್ ಬೇಗಂ, ನಾಗಶ್ರೀ ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಲಾವಣ್ಯ ಮತ್ತು ಸದಸ್ಯರು ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಾಲಾ ಮಕ್ಕಳೇ ನಿರೂಪಿಸಿ ಸ್ವಾಗತಿಸಿ ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.