ಬೆಂಗಳೂರು: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಹೋಬಳಿಯಲ್ಲಿರುವ ಕರ್ನಾಟಕ ಪಬ್ಲಿಕ್ ಸರ್ಕಾರಿ ಶಾಲೆಯ 8, 9 ಹಾಗೂ 10ನೇ ತರಗತಿಗಳಿಗೆ ಇಂಗ್ಲಿಷ್ ವಿಷಯದ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಿ ಎಂದು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಆಯುಕ್ತರಿಗೆ ನಿರ್ದೇಶಿಸಿದೆ.
ತುರುವೇಕೆರೆ ತಾಲ್ಲೂಕಿನ ದುಂಡ ಗ್ರಾಮದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಡಿ.ಟಿ. ಲಕ್ಷ್ಮೀನಾರಾಯಣ ಸಲ್ಲಿಸಿರುವ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಶಿಕ್ಷಕರನ್ನು ನೇಮಕ ಮಾಡಿದ ಕುರಿತಂತೆ ಅನುಪಾಲನಾ ವರದಿಯನ್ನು ಇದೇ 22ರೊಳಗೆ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶಿಸಿದೆ.
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 8,9 ಹಾಗೂ 10ನೇ ತರಗತಿಯಲ್ಲಿ ಒಟ್ಟು 166 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಇಂಗ್ಲಿಷ್ ಭಾಷೆ ಬೋಧಿಸುವ ಶಿಕ್ಷಕರನ್ನು ನೇಮಕ ಮಾಡಿಲ್ಲ. ಈ ಕುರಿತು ಕಳೆದ ಅಕ್ಟೋಬರ್ 10ರಂದು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಅನಿವಾರ್ಯವಾಗಿ ಹೈಕೋರ್ಟ್ ಮೆಟ್ಟಿಲು ಏರುವಂತಾಗಿತ್ತು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700