ಮಂಡ್ಯ: ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಇಂದು ಅದ್ಧೂರಿಯಾಗಿ ಆಚರಿಸಿದರು.
ನಾಡದೇವತೆ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಲು ತೆರಳುತ್ತಿದ್ದ ಹೆಚ್ ಡಿಕೆ ಅವರನ್ನು ಮದ್ದೂರು ಮತ್ತು ಮಂಡ್ಯದ ವಿಸಿ ಫಾರಂ ಗೇಟ್ ಬಳಿ ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ ಮತ್ತು ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ ಹಾಗೂ ಜಾನಪದ ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು.
ಪಕ್ಷದ ಮುಖಂಡರೊಂದಿಗೆ ಕೇಕ್ ಕತ್ತರಿಸಿದ ನಂತರ, ಗುತ್ತಿಗೆದಾರ ಶಂಕರೇಗೌಡ ಅವರು ಸಚಿವರಿಗೆ ದುಬಾರಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾರ್ಯಕರ್ತರ ಶುಭ ಹಾರೈಕೆಗೆ ಚಿರಋಣಿ ಎಂದರು.
ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ಗೃಹಲಕ್ಷ್ಮಿ ಹಣ ವಿತರಣೆಗಿಂತಲೂ ರೈತರ ಆತ್ಮಹತ್ಯೆ ಮುಂದುವರೆದಿರುವುದು ಮುಖ್ಯ ಸಮಸ್ಯೆಯಾಗಿದೆ. ಲೂಟಿ ಮಾಡುವುದೇ ಅಭಿವೃದ್ಧಿ ಎಂದು ಸರ್ಕಾರ ತಿಳಿದಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಕಾರ್ಯಕರ್ತರೊಬ್ಬರು ಕುಮಾರಸ್ವಾಮಿ ಅವರ ಯಶಸ್ಸಿಗಾಗಿ ರುದ್ರಹೋಮ ಮಾಡಿಸಿದ ತಾಯತವನ್ನು ಉಡುಗೊರೆಯಾಗಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


