ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. ನಾನು ಯಾವುದೇ ಲೂಟಿ ಹೊಡೆಯುವ ಸಂಸ್ಥೆಗಳನ್ನು ನಡೆಸುತ್ತಿಲ್ಲ. ನಿಮಗೆ ಈ ಪಕ್ಷಗಳು ಇನ್ನೊಂದು ಶ್ರೀಲಂಕಾ ಸೃಷ್ಟಿ ಮಾಡುತ್ತದೆ. ಹೀಗಾಗಿ ಇಂತಹ ಪಕ್ಷಗಳು ನಿಮಗೆ ಬೇಕಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ದಾಸರಹಳ್ಳಿಯ ಅಬ್ಬಿಗೆರೆ ಹಾಗೂ ಹೊಸಕೆರೆಹಳ್ಳಿಯಲ್ಲಿ ನಡೆದ ಜನತಾ ಮಿತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಬೆಂಗಳೂರಿನಲ್ಲಿ ನೆಲೆಯೇ ಇಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ನಮ್ಮ ಪಕ್ಷಕ್ಕೆ ನಗರದಲ್ಲಿ ನೆಲೆ ಇದೆಯೋ ಇಲ್ಲವೋ ಎಂಬುದನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತೋರಿಸುತ್ತೇನೆ ಎಂದರು.
ಬಡವರನ್ನು ಹಿಂಸೆ ಮಾಡುವ ಕೆಲಸ ನಡೆದರೆ ಶ್ರೀಲಂಕಾದ ಪರಿಸ್ಥಿತಿ ಇಲ್ಲಿಯೂ ನಡೆಯುತ್ತದೆ. ಇನ್ನೊಂದು ಶ್ರೀಲಂಕಾ ಸೃಷ್ಟಿ ಮಾಡುವ ಪಕ್ಷಗಳು ನಿಮಗೆ ಬೇಕಾ ಎಂದು ಎಚ್ ಡಿಕೆ ಪ್ರಶ್ನೆ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


