ನಂಜನಗೂಡು: ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಶಂಕರ್ ನಾಯಕ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗಮಲ್ಲೇಶ್, ವಿದ್ಯಾರ್ಥಿಗಳು ಮೂಢನಂಬಿಕೆಯನ್ನು ಬಿಡಬೇಕು. ಜಾತಿಯ ವ್ಯವಸ್ಥೆಯೇ ಮೂಢನಂಬಿಕೆಯಾಗಿದೆ. ದೇಶದಲ್ಲಿ ಇನ್ನೂ ಜಾತಿ ವ್ಯವಸ್ಥೆ ಇರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.
ಎಲ್ಲಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು. ವಿಜ್ಞಾನ, ಆರ್ಥಿಕ, ವಿಷಯಗಳನ್ನು ಅಧ್ಯಯನ ಮಾಡಿದರೆ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ. ವಿದ್ಯಾರ್ಥಿಗಳಿಗೆ ಗುರಿ ಇರಬೇಕು. ಎಲ್ಲ ಕ್ಷೇತ್ರಗಳಲ್ಲೂ ವಿದ್ಯಾರ್ಥಿಗಳು ಜ್ಞಾನವನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಜ್ಞಾನವೇ ಒಂದು ದೊಡ್ಡ ಶಕ್ತಿ, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆಯಿದೆ ಅವರು ಸಮಯವನ್ನು ಬಳಸಿಕೊಳ್ಳಬೇಕು. ಕಳೆದುಕೊಂಡ ಸಮಯ ಮತ್ತೆ ಸಿಗುವುದಿಲ್ಲ. ಆದ್ದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ವೇಳೆ ಬಹುಮಾನವನ್ನು ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಆರ್.ಸಿದ್ದರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಕೆಎಂ ಪುಟ್ಟು, ಐ ಓಬಿ ಬ್ಯಾಂಕ್ ಮ್ಯಾನೇಜರ್ ಲಿಂಗರಾಜ್ ಪ್ರಧಾನ್, ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ್ ಕುಮಾರ್, ಉಪ ಪ್ರಾಂಶುಪಾಲ ಟಿಎನ್ ರಘು, ಉಪನ್ಯಾಸಕರಾದ ಭಾರತಿ, ಮಂಜುನಾಥ್, ಯೋಗೇಶ್, ವೆಂಕಟರಮಣ, ಶಶಿಧರ್ , ಮೇನಕಾ, ನಟರಾಜ್, ಮಹದೇವಸ್ವಾಮಿ, ಕಾಲೇಜು ಅಭಿವೃದ್ದಿ ಸದಸ್ಯರಾದ ನಜೀಂ ಉಲ್ಲಾ ಖಾನ್ , ಶಿವಣ್ಣ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


