ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪಿಎಂ ಪೋಷಣ್ ಯೋಜನೆಯಡಿ ಮಕ್ಕಳಿಗೆ ವಿಶೇಷ ಭೋಜನ ಮತ್ತು ಶಾಲೆಗಾಗಿ ನಾವು ನೀವು ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಿಕ್ಷಣ ಇಲಾಖೆಯು ಹಬ್ಬ ಹರಿದಿನಗಳಲ್ಲಿ ಹಬ್ಬದೂಟ ನೀಡಲು ಸೂಚನೆ ನೀಡಿದ್ದು, ಈ ಕಾರ್ಯಕ್ರಮದಡಿ ದಾನಿಗಳು, ಟ್ರಸ್ಟ್, ಸಂಘ, ಸಂಸ್ಥೆಗಳು, ಎಸ್ ಡಿಎಂಸಿಗಳು, ಸಾರ್ವಜನಿಕರು ಸೇರಿದಂತೆ ಸಮುದಾಯದವರು ತಮ್ಮದೇ ಆರ್ಥಿಕ ಅಥವಾ ಆಹಾರ ಸಹಕಾರ, ನೆರವಿನೊಂದಿಗೆ ಮಕ್ಕಳ ಸಂಪೂರ್ಣ ವಿಶೇಷ ಭೋಜನ ವ್ಯವಸ್ಥೆ ಅಥವಾ ಬಿಸಿಯೂಟಕ್ಕೆ ಪೂರಕವಾಗಿ ಪೌಷ್ಠಿಕ ಆಹಾರ ನೀಡಲು ಮುಂದಾಗಿದೆ.
ಶಾಲೆಗಳಲ್ಲಿ ವಿಶೇಷವಾಗಿ ಊರಿನ ಹಬ್ಬ, ಜಾತ್ರೆ, ತೇರು, ರಾಷ್ಟ್ರೀಯ ಹಬ್ಬಗಳು, ಜನ್ಮದಿನ, ಜಯಂತಿ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ಸ್ಥಳೀಯವಾಗಿ ಸಮುದಾಯದಿಂದ ಸಾಮೂಹಿಕವಾಗಿ ಆಚರಿಸುವ ವಿಶೇಷ ಕಾರ್ಯಕ್ರಮಗಳ ಅಂಗವಾಗಿ ವಿಶೇಷ ಭೋಜನ, ವಿಶೇಷ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy