ಮೈಸೂರು: ವರದಕ್ಷಿಣೆ ಕಿರುಕುಳದಿಂದ ನೊಂದು ಗರ್ಭಿಣಿ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ.
8 ತಿಂಗಳ ಗರ್ಭಿಣಿ ಚೈತ್ರಾ @ ಚಿಕ್ಕದೇವಿ (23) ಸಾವಿಗೆ ಶರಣಾದವರಾಗಿದ್ದಾರೆ. 2 ವರ್ಷಗಳ ಹಿಂದೆ ಕನಕಗಿರಿಯ ಶರತ್ ರಾಜು ಎಂಬಾತನೊಂದಿಗೆ ನೂರಾರು ಕನಸು ಹೊತ್ತು ವಿವಾಹವಾಗಿದ್ದರು. ಆದರೆ ಪತಿ, ಅತ್ತೆ, ಚಿಕ್ಕತ್ತೆ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡಿದ್ದರು ಎನ್ನಲಾಗಿದೆ.
ಚೈತ್ರಾಳ ತಂದೆ—ತಾಯಿ ಪತಿಯ ವಿರುದ್ಧ ಇದೀಗ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರಂ ಪೊಲೀಸರು ಶರತ್ ರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


