ತುಮಕೂರು: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮ ಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ತುಮಕೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ 23 ರಿಂದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲಿಚ್ಛಿಸುವ ಮಹಿಳೆ ಹಾಗೂ ಪುರುಷರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಯೋಜನೆ ಆಯ್ಕೆ, ಮಾರುಕಟ್ಟೆ, ಯೋಜನಾ ವರದಿ ತಯಾರಿಕೆ, ತೆರಿಗೆ ಮತ್ತು ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.
ಎಸ್.ಎಸ್.ಎಲ್.ಸಿ. ಪಾಸಾದ, ಶೇ.25ರಷ್ಟು ಬಂಡವಾಳ ಹೂಡಲು ಶಕ್ತರಿರುವ 21 ರಿಂದ 45 ವರ್ಷದೊಳಗಿನ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವವರು ಸೆಪ್ಟೆಂಬರ್ 20ರೊಳಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ತುಮಕೂರು ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.8073313988ನ್ನು ಸಂಪರ್ಕಿಸಬೇಕೆಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296