ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ 2 ವಾರಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ತರಬೇತಿ ಕಾರ್ಯಕ್ರಮವು ನಗರದ ಬಿ.ಹೆಚ್. ರಸ್ತೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯಲಿದ್ದು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಉದ್ಯಮ ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು.
ತರಬೇತಿ ಪಡೆಯಲಿಚ್ಛಿಸುವ ಯುವನಿಧಿ ಫಲಾನುಭವಿಗಳು ಡಿಸೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ. ಬಸ್ ನಿಲ್ದಾಣ, ತುಮಕೂರು ಅಥವಾ ದೂ. ವಾ.ಸಂ. 7022746755ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


