ಚಿಕ್ಕಬಳ್ಳಾಪುರ: ಹೊಸ ವರ್ಷವನ್ನು ಸಂಭ್ರಮಿಸಲು ಜನ ಸಿದ್ಧರಾಗಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಆದೇಶಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಂದಿಗಿರಿಧಾಮದಲ್ಲಿ ಡಿಸೆಂಬರ್ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದೆ.


