ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಜ. 11 ರಂದು ಬೆಳಗ್ಗೆ ಶಾಸಕರ ಉಪಸ್ಥಿತಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಿಸುವ ಕುರಿತಂತೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೇ ತಾವುಗಳು ಖುದ್ದು, ಈ ಸಭೆಗೆ ಆಗಮಿಸಿ, ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ಸೂಚಿಸಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಕಾರ್ಯಕ್ರಮಗಳಲ್ಲಿ ಹಾಗೂ ಪೂರ್ವಭಾವಿ ಸಭೆಗಳಿಗೆ ಹಲವಾರು ಅಧಿಕಾರಿಗಳು ಭಾಗವಹಿಸದಿರುವುದು ಕಂಡು ಬಂದಿದ್ದು, ಜನಪ್ರತಿನಿಧಿಗಳು, ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಈ ಅಧಿಕಾರಿಗಳ ಗೈರು ಹಾಜರಿ ಬಗ್ಗೆ ತುಂಬಾ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ಇನ್ನು ಮುಂದೆ ಇಂತಹ ಪ್ರಸಂಗಗಳಿಗೆ ಅವಕಾಶ ನೀಡದೇ ಅಧಿಕಾರಿಗಳೇ ಖುದ್ದಾಗಿ ಪೂರ್ವಭಾವಿ ಸಭೆಯಲ್ಲಿ ಬಾಗವಹಿಸಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ತಿಳಿಸಿದ್ದಾರೆ.
ಇದಕ್ಕೆ ತಪ್ಪಿದಲ್ಲಿ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಅನಿವಾರ್ಯವಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು. ಹಾಗೆಯೇ ಈ ಪೂರ್ವಭಾವಿ ಸಭೆಗೆ ತಾಲ್ಲೂಕಿನ ಚುನಾಯಿತ ಪ್ರತಿನಿಧಿಗಳು, ದಲಿತ ಮುಖಂಡರು, ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪತ್ರಕರ್ತರು ಹಾಗೂ ಎಲ್ಲಾ ಸಮುದಾಯದ ಪ್ರಮುಖರು ಭಾಗವಹಿಸಿ, ರಾಷ್ಟ್ರೀಯ ಹಬ್ಬಗಳ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಕ್ತ ಸಲಹೆ ಹಾಗು ಸೂಚನೆಗಳನ್ನು ನೀಡಲು ತಹಶೀಲ್ದಾರ್ ಶಿವಕುಮಾರ್ ರವರು ಮನವಿ ಮಾಡಿದ್ದಾರೆ.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy