ತುಮಕೂರು: ಹಿಂದಿನ ಕಾಲದಲ್ಲಿ ಪರಿಸರದಲ್ಲಿ ಪ್ರಾಣಿ ಪಕ್ಷಿ ಕೀಟಗಳು ಹೇರಳವಾಗಿದ್ದವು. ತಂತ್ರಜ್ಞಾನ ಬಳಕೆ ಹೆಚ್ಚಿದಂತೆ ಕಾಡು, ವನ್ಯಜೀವಿ ಸಂತತಿ ನಶಿಸುತ್ತಿದೆ. ಎಷ್ಟೋ ಪ್ರಭೇದಗಳು ಈಗಾಗಲೇ ಸಂಪೂರ್ಣ ನಾಶಹೊಂದಿವೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು.
ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಸ್ನಾತಕೋತ್ತರ ಪರಿಸರ ವಿಜ್ಞಾನ ವಿಭಾಗ ಸೋಮವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತೊ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪರಿಸರ ಸಂರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಮುಂದಿನ ಪೀಳಿಗೆಗೆ ನೀರು, ಗಾಳಿ, ಬೆಳಕು, ಮಣ್ಣು ಮುಂತಾದ ಮೂಲಭೂತ ಘಟಕಗಳನ್ನು ಉಳಿಸಬೇಕು. ಇಲ್ಲವಾದರೆ ಎಲ್ಲವೂ ಒಂದು ದಿನ ನಶಿಸಿ ಹೋಗುತ್ತದೆ ಎಂದರು.
ಕುಲಸಚಿವೆ ನಾಹಿದಾ ಜûಮ್ ಜûಮ್ ಮಾತನಾಡಿ, ಕರ್ನಾಟಕ ಹಾಗೂ ಇತರೆ ರಾಜ್ಯಗಳಲ್ಲಿ ನೈಸರ್ಗಿಕ ಮತ್ತು ಮಾನವ ನಿರ್ಮಿತ ಜೌಗು ಪ್ರದೇಶಗಳನ್ನು ಉಳಿಸುವ ಬಗ್ಗೆ ಪಠ್ಯದಲ್ಲಿ ಇದ್ದರೂ ಕೂಡ ವಿದ್ಯಾರ್ಥಿಗಳಿಗೆ ಸ್ಥಳೀಯ ಪರಿಸರದ ಮಾಹಿತಿಯೇ ಸರಿಯಾಗಿ ಇರುವುದಿಲ್ಲ ಎಂಬುದು ಬೇಸರದ ಸಂಗತಿ. ನಮ್ಮ ಸುತ್ತಮುತ್ತಲಿನ ಅಮಾನಿಕೆರೆ, ಭೀಮಸಮುದ್ರ, ಮೈದಾಳಕೆರೆ ಮುಂತಾದವುಗಳ ಕುರಿತು ವಿದ್ಯಾರ್ಥಿಗಳು ಹೆಚ್ಚಿನ ಸಂಶೋಧನೆ ಮತ್ತು ಅಧ್ಯಯನ ಮಾಡಬೇಕು ಎಂದರು.
ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಶೇಟ್ ಪ್ರಕಾಶ್ ಎಂ., ಪರಿಸರ ವಿಜ್ಞಾನ ವಿಭಾಗದ ಸಂಯೋಜಕಿ ಡಾ. ಪೂರ್ಣಿಮಾ ಡಿ. ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4