ಪಾವಗಡ : ತಾಲ್ಲೂಕಿನ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಗೆ ‘ಪರಿಸರ ಶಾಲಾ ಪ್ರಶಸ್ತಿ’ ದೊರೆತಿದೆ.
ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ, ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ, ನೀರು ಮತ್ತು ಪರಿಸರ ಸಂರಕ್ಷಣೆಯ ಕುರಿತು ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಶಾಲೆಯಲ್ಲಿ ನಿರಂತರವಾಗಿ ವಿವಿಧ ಶೈಕ್ಷಣಿಕ ಹಾಗೂ ಪರಿಸರ ಸಂಬಂಧಿತ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಕಾರ್ಯಕ್ರಮಗಳಿಗೂ ಆದ್ಯತೆ ನೀಡಲಾಗುತ್ತಿದೆ.
ಶಾಲೆಯ ಪರಿಸರ ಸ್ನೇಹಿ ಚಟುವಟಿಕೆಗಳು, ಶೈಕ್ಷಣಿಕ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸುತ್ತಿರುವುದನ್ನು ಪರಿಗಣಿಸಿ, ತುಮಕೂರು ವಿಜ್ಞಾನ ಕೇಂದ್ರವು ಶ್ರೀಮತಿ ಅರಸಮ್ಮ ಮತ್ತು ಡಿ.ಸಿ. ಚಿಕ್ಕಣ್ಣ ಅವರ ಸ್ಮರಣಾರ್ಥ ನೀಡುವ ‘ಪರಿಸರ ಶಾಲಾ ಪ್ರಶಸ್ತಿ’ಗೆ ಸಹನಾ ಆಂಗ್ಲ ಮಾಧ್ಯಮ ಶಾಲೆಯನ್ನು ಆಯ್ಕೆ ಮಾಡಿದೆ.
ಶಾಲೆಯ ಪರವಾಗಿ ಸಮಾಜ ವಿಜ್ಞಾನ ಶಿಕ್ಷಕ ಜಿನಿಶ್ ಅವರು ವಿದ್ಯಾರ್ಥಿಗಳೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.
ತುಮಕೂರು ವಿಜ್ಞಾನ ಕೇಂದ್ರದ ಅಧ್ಯಕ್ಷೆ ಅಕ್ಕಮ್ಮ, ಕಾರ್ಯದರ್ಶಿ ಪಿ. ಪ್ರಸಾದ್, ಉಪಾಧ್ಯಕ್ಷ ಸಿ. ಯತಿರಾಜು, ಪ್ರೊ. ಟಿ.ಎನ್. ಚಂದ್ರಕಾಂತ್, ಸಿ. ವಿಶ್ವನಾಥ್, ಕೆ. ನಾಗರಾಜ್ ರಾವ್, ಎಂ. ಗಂಗಾಧರಪ್ಪ, ಅರಸಪ್ಪ, ಎನ್. ಇಂದಿರಮ್ಮ, ರಾಮಕೃಷ್ಣಪ್ಪ, ಹನುಮದಾಸ್ ಹಾಗೂ ಈ. ಬಸವರಾಜ್ ಉಪಸ್ಥಿತರಿದ್ದರು.
ಈ ಪ್ರಶಸ್ತಿ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರ ಪರಿಸರ ಕಾಳಜಿ ಮತ್ತು ನಿರಂತರ ಪ್ರಯತ್ನಕ್ಕೆ ಸಂದ ಗೌರವವಾಗಿದೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
