ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆ ಆಟವಾಡುವ ಸಮಯದಲ್ಲಿ ಇರುವೆ ಪುಡಿಯನ್ನು ತಿಂದಿದೆ.
ವಿಷ ತಿಂದು ನರಳಾಡುತ್ತಿದ್ದ ಮಗುವನ್ನು ಗಮನಿಸಿದ ಪೋಷಕರು ತಕ್ಷಣ ಕಾಮಗೆರೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮಗು ಚಿಕಿತ್ಸೆಗೆ ಫಲಿಸದೆ ಗುರುವಾರ ರಾತ್ರಿ ಸಾವನ್ನಪ್ಪಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy