ಶಿವಮೊಗ್ಗ: ಬಿಜೆಪಿ ದೇಶದಲ್ಲೇ ಭ್ರಷ್ಟಾಚಾರದ ದೊಡ್ಡ ಪಕ್ಷ. ಇದನ್ನು ಬಿಜೆಪಿಯವರೇ ಹೇಳುತ್ತಿದ್ದಾರೆ. ಈ ಹಿಂದೆ ಬಿಜೆಪಿ ಭ್ರಷ್ಟ ಆಡಳಿತದ ಬಗ್ಗೆ ಖುದ್ದು ಈಶ್ವರಪ್ಪ ಅವರೇ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವತ್ತು ಈಶ್ವರಪ್ಪ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು ಸ್ವಾಭಿಮಾನ ಇಲ್ಲದೇ ಬದುಕುತ್ತಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡು ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ ಎನ್ನುತ್ತಾರೆ. ಆದರೆ, ಅಮಿತ್ ಷಾ ಅವರು ಬೊಮ್ಮಾಯಿ ನಾಯಕತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ ಎಂದಿದ್ದಾರೆ. ಅಧಿಕಾರಕ್ಕಾಗಿ ಬಿಜೆಪಿ ಏನೆಲ್ಲ ಆಟವಾಡುತ್ತಿದೆ ಎಂದು ಡಿಕೆಶಿ ಕುಟುಕಿದರು.
ಸಚಿವ ಈಶ್ವರಪ್ಪ ಅವರು ತಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದೇನೆ ಎಂಬುದನ್ನೇ ಮರೆತಿದ್ದಾರೆ. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇರಬೇಕು ಎಂದರೆ ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕಿತ್ತೊಗೆಯಬೇಕು. ಇದೇ ಬಿಜೆಪಿಗೆ ಇರುವ ಮಾರ್ಗ ಎಂದು ಬಿಜೆಪಿ ವಿರುದ್ಧ ಅವರು ಕಿಡಿಕಾರಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700