ಭಾರತ್ ಜೋಡೋ ಯಾತ್ರೆಯನ್ನು ಬಿಟ್ಟು ಮೊದಲು ತಮ್ಮ ಪಕ್ಷವನ್ನು ಜೋಡಿಸಿಕೊಳ್ಳುವಂತೆ ಟೀಕಿಸಿದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿಗೆ ನಮ್ಮ ಪಕ್ಷದ ಬಗ್ಗೆ ಯೋಚಿಸುವ ಅಗತ್ಯವಿಲ್ಲ. ತಮ್ಮಲ್ಲಿರುವ ಪ್ರಮಾದಗಳನ್ನು ಅವರು ಸರಿಪಡಿಸಿಕೊಳ್ಳಲಿ, ಪಾಪ ಈಶ್ವರಪ್ಪ ಕಣ್ಣೀರು ಸುರಿಸುತ್ತಿದ್ದಾರೆ. ಅವರನ್ನ ಸಮಾಧಾನಪಡಿಸಲಿ ಎಂದು ಲೇವಡಿ ಮಾಡಿದರು.
ಅಕ್ಟೋಬರ್ 6 ರಂದು ನಡೆಯುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ ಹಬ್ಬ ಹಿನ್ನೆಲೆಯಲ್ಲಿ 2 ದಿನ ವಿಶ್ರಾಂತಿ ಪಡೆಯುತ್ತಾರೆ. ಅಲ್ಲಿಗೆ ಯಾವ ಕಾರ್ಯಕರ್ತ, ಮುಖಂಡರಿಗೂ ಅವಕಾಶ ಇಲ್ಲ. ಅ. 5 ರಂದು ಮೈಸೂರಿಗೆ ಖರ್ಗೆ ಬರಲಿದ್ದಾರೆ. ಅ.6 ರಂದು ಖರ್ಗೆ ಕೂಡ ಭಾಗಿಯಾಗಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


